
ಶಿವಮೊಗ್ಗ: ಇಬ್ಬರು ಪುಟ್ಟ ಮಕ್ಕಳನ್ನು ಹಿಡಿದುಕೊಂಡು ತಾಯಿ ಬಾವಿಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಮೃತರು ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ (32) ಮತ್ತು ಇಬ್ಬರು ಮಕ್ಕಳಾದ ಸಮರ್ಥ(12), ಸಂಪದ (6) ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ದುರಂತ ನಡೆದಿದ್ದು, ಇದುವರೆಗೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಿಂದ ಮೃತದೇಹಗಳನ್ನು ಹೊರತೆಗೆದು ನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
Poll (Public Option)

Post a comment
Log in to write reviews