
ಉತ್ತರ ಪ್ರದೇಶ : ಮಗನ ಕತ್ತು ಸೀಳಿ, ಸ್ಟವ್ ಮೇಲೆ ದೇಹವನ್ನು ಸುಡಲು ಮುಂದಾಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ.
ಮಹಿಳೆ ನಾಲ್ಕು ವರ್ಷದ ಮಗನನ್ನು ಹತ್ಯೆ ಮಾಡಿದ್ದಕ್ಕಾಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮೊದಲು ಮಗುವಿನ ಕತ್ತು ಸೀಳಿ ನಂತರ ಶವವನ್ನು ಮನೆಗೊಳಗಿನ ಒಲೆಯ ಮೇಲೆ ಸುಡಲು ಯತ್ನಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಪಾತಕಿ ದೇವಿ ಅವರ ಪತಿ ಕಪಿಲ್ ಕುಮಾರ್ ಅವರು ಕೆಲಸದಿಂದ ಮನೆಗೆ ಹಿಂದಿರುಗಿದಾಗ ತಮ್ಮ ಮಗ ಸತ್ತಿರುವುದನ್ನು ಕಂಡಾಗ ನಿಜಾಂಶ ತಿಳಿದುಬಂದಿದೆ. ಆಘಾತಕ್ಕೊಳಗಾದ ಕುಮಾರ್ ತಕ್ಷಣ ಕುಟುಂಬ ಸದಸ್ಯರನ್ನು ಸಹಾಯಕ್ಕಾಗಿ ಕರೆದಿದ್ದು ಕುಟುಂಬ ಸದಸ್ಯರು ಬಂದಾಗ, ಕೊಲೆ ಪಾತಕಿ ದೇವಿ, ಸಲಿಕೆ ಹಿಡಿದು ಕುಟುಂಬಸ್ಥರನ್ನು ಮತ್ತು ಕುಮಾರ್ ಅವರನ್ನು ಮನೆಯಿಂದ ಓಡಿಸಿದಳು. ಈ ಘಟನೆಯ ಬಗ್ಗೆ ಕುಮಾರ್ ಪೊಲೀಸರಿಗೆ ಮಾಹಿತಿ ನೀಡಿದಾಗ ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರ್ಜ್ ಮತ್ತು ಸರ್ಕಲ್ ಆಫೀಸರ್ ಚಂದ್‌ಪುರ ಭರತ್ ಸೋಂಕರ್ ಆಗಮಿಸಿ ಅವರು ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಕುಮಾರ್ ಅವರ ದೂರಿನ ಆಧಾರದ ಮೇಲೆ ದೇವಿ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ.
Poll (Public Option)

Post a comment
Log in to write reviews