2024-09-19 04:35:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು

ಮೈಸೂರು, ಸೆ.16: ಸಾಂಸ್ಕೃತಿಕ ನಗರಿ ಮೈಸೂರಿನ ಗಣೇಶೋತ್ಸವದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದಿದ್ದಾರೆ. ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಣೆ ಮಾಡಲಾಗಿದೆ. ಗಣೇಶೋತ್ಸವದಲ್ಲಿ ಮುಸ್ಲಿಂ ಬಾಂಧವರು ಭಾಗಿಯಾಗಿದ್ದಾರೆ. ಪರಸ್ಪರ ಶುಭ ಕೋರಿ ಮಾನವೀಯತೆ ಮೆರೆದಿದ್ದಾರೆ.

ರಾಜ್ಯದ ಹಲವೆಡೆ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ಗಲಾಟೆಗಳು ನಡೆಯುತ್ತಿವೆ. ಇದರ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದಿದ್ದಾರೆ. ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಣೆ ಮಾಡಲಾಗಿದೆ. ಮೈಸೂರಿನ ಸುಣ್ಣದ ಕೇರಿಯಲ್ಲಿ ಶ್ರೀವಿನಾಯಕ ಗೆಳೆಯರ ಬಳಗದಿಂದ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದ್ದು ಗಣೇಶೋತ್ಸವದಲ್ಲಿ ಮುಸ್ಲಿಂ ಬಾಂಧವರು ಭಾಗಿಯಾಗಿದ್ದಾರೆ. ಪರಸ್ಪರ ಶುಭ ಕೋರಿ ಮಾನವೀಯತೆ ಮೆರೆದಿದ್ದಾರೆ.

Post a comment

No Reviews