
ಜಮ್ಮುಕಾಶ್ಮೀರದ ರಿಯಾಸಿಯಲ್ಲಿ ಬಸ್ ಮೇಲೆ ಭಯೋತ್ಪಾದಕರ ದಾಳಿಯ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ಜಮ್ಮು- ಕಾಶ್ಮೀರವಾದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಯೋಧರು ಹಾಗೂ ಭಯೋತ್ಪಾದಕರ ನಡುವೆ ನಡೆದ ಸಂಘರ್ಷದಲ್ಲಿ ಒಬ್ಬ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದು, ಅನೇಕ ಮಂದಿ ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.
ದೋಡಾ ಜಿಲ್ಲೆಯಲ್ಲಿ, ಭದರ್ವಾ-ಪಥಂಕೋಟ್ ರಸ್ತೆಯಲ್ಲಿ ಚಟರ್ಗಲ್ಲಾದ ಮೇಲ್ಭಾಗದಲ್ಲಿ ಜಂಟಿ ಚೆಕ್ ಹುದ್ದೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಈ ವೇಳೆ ರಾಷ್ಟ್ರೀಯ ರೈಫಲ್ಸ್‌ನ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (SPO) ಗಾಯಗೊಂಡಿದ್ದಾರೆ.
ಮತ್ತೊಂದೆಡೆ, ಕಥುವಾ ಜಿಲ್ಲೆಯ ಸೈದಾ ಸುಖಲ್ ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸಿಎರ್‌ಪಿಎಫ್ ಯೋಧ ಕಬೀರ್ ದಾಸ್ ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲದೇ ಭಯೋತ್ಪಾದಕರು ಮಂಗಳವಾರ ಸಂಜೆ ಅಂತರಾಷ್ಟ್ರೀಯ ಗಡಿಯ ಬಳಿಯಿರುವ ಹಳ್ಳಿಯ ಮೇಲೆ ದಾಳಿ ನಡೆಸಿದ್ದಾರೆ. ಇದರಿಂದ ಹಲವು ನಾಗರಿಕರು ಗಾಯಗೊಂಡಿದ್ದಾರೆ. ಈ ಹಳ್ಳಿಯನ್ನು ಸುತ್ತುವರಿದಿರುವ ಸಿಆರ್‌ಪಿಎಫ್ ಯೋಧರು ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ. ಅಲ್ಲದೇ ಹಳ್ಳಿಯಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರಿಗಾಗಿ ಸಿಆರ್‌ಪಿಎಫ್‌ನ ಸಹಾಯದಿಂದ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
Poll (Public Option)

Post a comment
Log in to write reviews