
ದೇವನಹಳ್ಳಿ: ಅಂಗಡಿಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ.
ಸೂಲಿಬೆಲೆಯ 4 ವರ್ಷದ ಅವಾಜ್ ಬಾಷಾ ಎಂಬ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು ಬಾಲಕನ ಮುಖಕ್ಕೆ ಗಾಯಗಳಾಗಿವೆ.
ನಿನ್ನೆ ಸಂಜೆ ಮಕ್ಕಳ ಜೊತೆ ಅಂಗಡಿಗೆ ಹೋಗುತ್ತಿದ್ದ ವೇಳೆ ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿ ಬಾಲಕನನ್ನು ಕಚ್ಚಿ ಗಾಯಮಾಡಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಬಾಲಕನನ್ನು ನಾಯಿಗಳಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಅಧಿಕಾರಿಗಳಿಗೆ ಸ್ಥಳೀಯರು ಆಗ್ರಹಿಸಿದ್ದಾರೆ.
Poll (Public Option)

Post a comment
Log in to write reviews