ದೆಹಲಿ: ಆರು ಅಂತಸ್ತಿನ ಕಟ್ಟಡದ ಐದನೇ ಮಹಡಿಯಿಂದ ಹಾರಿ 19 ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ. ಆಕೆ ಆರು ಅಂತಸ್ತಿನ ಕಟ್ಟಡದ ಐದನೇ ಮಹಡಿಯಲ್ಲಿ ನಿಂತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದ್ದು, ಆಕೆಯಿಂದ ಯಾವುದೇ ಸೂಸೈಡ್ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾತ್ರಾ ಆಸ್ಪತ್ರೆಗೆ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿನಿಯನ್ನು ಕರೆದೊಯ್ದು ನಂತರ ಮಜೀದಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ವೇಳೆ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕ್ರೈಂ ತಂಡ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಏಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
Post a comment
Log in to write reviews