
ಬೆಂಗಳೂರು: ಟಿಕೆಟ್ ಸಿಗದೆ ಬುರ್ಖಾ ಸ್ಟೂಡೆಂಟ್ ನಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಬಂದಿದೆ ಎಂದು ಸಂಸದ ಪ್ರತಾಪ್ ಸಿಂಹ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಅಚ್ಚರಿ ಮೂಡಿಸಿದ್ದಾರೆ.
ರಘುಪತಿ ಭಟ್ ಪರವಾಗಿ ಪೋಸ್ಟ್ ಮಾಡಿ ಪಕ್ಷದ ವಿರುದ್ಧ ಪರೋಕ್ಷ ಅಸಮಾಧಾನ ಹೊರ ಹಾಕಿರುವ ಪ್ರತಾಪ್ ಸಿಂಹ, ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆ ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ್ದ ರಘುಪತಿ ಭಟ್ಟರಿಗೆ ಎಂಎಲ್ಎ ಟಿಕೆಟ್ಟೂ ಸಿಗಲಿಲ್ಲ. ಎಂಎಲ್‌ಸಿ ಟಿಕೆಟ್ಟನ್ನೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆಗೆ ಒಳಗಾಗಿ ಬುರ್ಖಾ ಸ್ಟೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದು ಪೋಸ್ಟ್ ಮಾಡಿದ್ದಾರೆ.
Poll (Public Option)

Post a comment
Log in to write reviews