
ನವದೆಹಲಿ: ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇನಲ್ಲಿ ರಾಂಗ್ ರೂಟ್‌ನಲ್ಲಿ ಬಂದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ರಾತ್ರಿ 11 ಗಂಟೆ ಸುಮಾರಿಗೆ ಸ್ವಿಫ್ಟ್ ಡಿಜೈರ್ ವಾಹನವು ಇಂಧನ ತುಂಬಿದ ನಂತರ ರಾಂಗ್ ಸೈಡ್‌ನಿಂದ ಹೆದ್ದಾರಿಗೆ ಪ್ರವೇಶಿಸಿ, ನಾಗ್ಪುರದಿಂದ ಮುಂಬೈಗೆ ಹೋಗುತ್ತಿದ್ದ ಎರ್ಟಿಗಾ ಕಾರಿಗೆ ಡಿಕ್ಕಿ ಹೊಡೆದಿತ್ತು.
ಅಪಘಾತ ತೀವ್ರತೆಗೆ ಎರ್ಟಿಗಾ ಕಾರು ಗಾಳಿಗೆ ಹಾರಿ ಹೆದ್ದಾರಿಯ ಬ್ಯಾರಿಕೇಡ್ ಮೇಲೆ ಬಿದ್ದಿದ್ದು, ಮತ್ತೊಂದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ಭೀಕರತೆಗೆ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಕ್ತಸಿಕ್ತ ಮೃತದೇಹಗಳು ಹೆದ್ದಾರಿಯಲ್ಲಿ ಬಿದ್ದಿರುವ ದೃಶ್ಯ ವೈರಲ್ ಆಗಿದೆ.
Poll (Public Option)

Post a comment
Log in to write reviews