
ಸಫಾರಿಗೆ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್ನ ಮೇಲೆ ಚಿರತೆ ಏರಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಡೆದಿದೆ.
ಚಿರತೆ ಬಸ್ ಮೇಲೆ ಏರಿ ಕಿಟಕಿಗಳಲ್ಲಿ ಪ್ರವಾಸಿಗರನ್ನು ನೋಡಿ ಗುರ್ ಎಂದಿದೆ. ನಂತರ ಚಾಲಕ ಬಸ್ ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಬಸ್ನಿಂದ ಕೆಳಕ್ಕೆ ಹಾರಿ ಹೋಗಿದೆ. ಕಳೆದ ಮೂರು ತಿಂಗಳ ಹಿಂದೆ ಉದ್ಯಾನವನದ ಕರಡಿ, ಸಿಂಹ ಸಫಾರಿಗಳಿಗೆ ಹೊಂದಿಕೊಂಡಂತೆ ಇರುವ ವಿಶಾಲ ತೆರೆದ ಆವರಣದಲ್ಲಿ 19 ಚಿರತೆಗಳಿಗೆ ಆಶ್ರಯ ನೀಡಿ ಪ್ರತಿ ದಿನ ಒಂದೊಂದು ತಂಡವನ್ನು ಸಫಾರಿಗೆ ಬಿಡಲಾಗುತ್ತಿದೆ.
Poll (Public Option)

Post a comment
Log in to write reviews