
ಸಿದ್ಧನಕೊಳ್ಳದ ಧರ್ಮಾಧಿಕಾರಿ ಡಾ. ಶಿವಕುಮಾರ ಸ್ವಾಮಿ ಸಂಚರಿಸುತ್ತಿದ್ದ ವಾಹನ ಹುನಗುಂದಾ ತಾಲೂಕು ಅಮೀನಗಡದ ಸಮೀಪ ಅಪಘಾತವಾಗಿದೆ.
ಬಾಣಂತಿಕೊಳ್ಳದ ತಿರುವಿನಲ್ಲಿ ಶಿವಕುಮಾರ ಸ್ವಾಮಿಗಳು ಸಂಚರಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ಟಿಪ್ಪರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಶ್ರೀಗಳ ವಾಹನ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಶ್ರೀಗಳಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಅಪಘಾತದಲ್ಲಿ ಶ್ರೀಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ .
Poll (Public Option)

Post a comment
Log in to write reviews