
ಪತಿ ಹಾಗೂ ಆತನ ಕುಟುಂಬಸ್ಥರಿಂದ ವರದಕ್ಷಿಣಿ ಕಿರುಕುಳದಿಂದಾಗಿ ಬೇಸತ್ತು ಮಹಿಳೆಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ನಗರದ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಗ್ರಾಮದ ಸೌಮ್ಯ ಎಂದು ಗುರುತಿಸಲಾಗಿದೆ. ಭಾನುವಾರ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿರುವ ತಾಯಿಯ ಮನೆಗೆ ಬಂದಿದ್ದ ಸೌಮ್ಯ, ರಾತ್ರಿ ಮನೆಯಿಂದ ಹೊರ ಬಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಎಂಬಾತನ ಜೊತೆ ಸೌಮ್ಯ ಮದುವೆಯಾಗಿದ್ದಳು.
ಮೃತ ಮಹಿಳೆಯ ಪೋಷಕರು ಆಕೆಯ ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಸೌಮ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Poll (Public Option)

Post a comment
Log in to write reviews