
ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ ನಟ ದರ್ಶನ್ ಅಭಿಮಾನಿ ವಿರುದ್ಧ ಎಚ್.ಡಿ.ಕೆ ಅಭಿಮಾನಿಗಳು ದೂರು ದಾಖಲಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಮಂಗಲಾ ಎಂಬಾಕೆ ಮೇಲೆ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷರಾದ ಜಾನಕೀರಾಮ್ ಅವರು ದೂರು ನೀಡಿದ್ದಾರೆ.
ದರ್ಶನ್ ವಿರುದ್ಧ ಕೊಲೆ ಅಪರಾಧ ಬರುವಂತೆ ಕುಮಾರಸ್ವಾಮಿ ಮಾಡಿದ್ದಾರೆ, ದುಡ್ಡು ಕೊಟ್ಟು ದರ್ಶನ್ ವಿರುದ್ಧ ಧಿಕ್ಕಾರ ಕೂಗಿಸಿದ್ದಾರೆ. ಸುಮಲತಾ ನಿಮಗೆ ಮಂಡ್ಯದಲ್ಲಿ ಸ್ಪರ್ಧಿಸೋಕೆ ಚಾನ್ಸ್ ಕೊಟ್ಟಿದ್ದಕ್ಕೆ ಡಿ ಬಾಸ್ ವಿರುದ್ಧ ಸ್ಕೆಚ್ ಹಾಕಿದ್ದಾರೆ. ಸುಮಲತಾರಿಂದ ಭಿಕ್ಷೆ ಹಾಕಿಸಿಕೊಂಡವರು ಅವರು ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಈ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲೂ ಹರಿದಾಡಿತ್ತು.
Poll (Public Option)

Post a comment
Log in to write reviews