
ದಕ್ಷಿಣ ಕನ್ನಡ: ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಯುವಕನೊಬ್ಬ ಬೈಕ್ ಚಲಾಯಿಸಿಕೊಂಡು ಕದ್ರಿ ದೇವಸ್ಥಾನದ ಪ್ರಾಂಗಣದ ಒಳಗೆಯೇ ಪ್ರವೇಶಿಸಿ ಹುಚ್ಚಾಟ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬೈಕ್ ಚಲಾಯಿಸಿಕೊಂಡು ಬಂದ ಯುವಕನೊಬ್ಬ ನೇರವಾಗಿ ಕದ್ರಿ ದೇವಸ್ಥಾನದ ಪ್ರಾಂಗಣದ ಒಳಗೆಯೇ ಪ್ರವೇಶಿಸಿ, ಬಳಿಕ ದೇವಸ್ಥಾನದಲ್ಲಿ ರಂಪಾಟ ಮಾಡಿದ್ದಲ್ಲದೆ ಆತನ ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಅಷ್ಟಕ್ಕೆ ಸುಮ್ಮನಾಗದ ಯುವಕ, ಅಣ್ಣಪ್ಪ ಸ್ವಾಮಿಯ ಗುಡಿಯ ಬಾಗಿಲನ್ನು ಕಾಲಿನಿಂದ ಒದ್ದು ಅಪಚಾರ ಮಾಡಿದಾನೆ. ನಂತರ ದೇವಸ್ಥಾನದ ಕತ್ತಿಯನ್ನು ಕೈಗೆತ್ತಿಕೊಂಡು ಹುಚ್ಚಾಟ ನಡೆಸಿದ್ದಾನೆ. ಕೂಡಲೇ ಸ್ಥಳೀಯರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಘಟನೆ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ನಿಡಿದ್ದು, ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಯುವಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
Poll (Public Option)

Post a comment
Log in to write reviews