
ಮೊಬೈಲ್ ಬಳಸಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ಆತ್ಯಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ತಿಪ್ಪಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 18 ವರ್ಷದ ನಿಖಿತಾ ಮೃತ ಯುವತಿ ಎಂದು ತಿಳಿದು ಬಂದಿದೆ.
ಪ್ಯಾರಾ ಮೆಡಿಕಲ್ ಓದುತ್ತಿದ್ದ ಲಿಖಿತಾ ಇತ್ತೀಚೆಗೆ ಹೆಚ್ಚಾಗಿ ಫೋನ್ ನೋಡುತ್ತಿದ್ದಳು. ಯಾವಾಗಲೂ ಫೋನ್ ನಲ್ಲಿ ಚಾಟಿಂಗ್ ಮಾಡುತ್ತಿದ್ದಳು. ಇದನ್ನು ಗಮನಿಸಿದ ತಂದೆ ನಾರಾಯಣ ಬೈದು ಬುದ್ದಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ಯುವತಿ ರೂಂನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Poll (Public Option)

Post a comment
Log in to write reviews