ಬೆಂಗಳೂರು : ಯುವತಿಯೊಬ್ಬರು ಪಿಜಿಯ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯ ವೈಟ್ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ನಡೆದಿದೆ.
ಆಂಧ್ರ ಪ್ರದೇಶದ ಕಡಪ ಮೂಲದ ಗೌತಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದು ಬಂದಿದೆ. ಸದ್ಯ ಬೆಂಗಳೂರಿನಲ್ಲಿ ನೆಲಸಿದ್ದ ಮೃತ ಯುವತಿ, ಟಿಸಿಎಸ್ನಲ್ಲಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ಮೃತ ಯುವತಿ ಗೌತಮಿ ಆತ್ಮಹತ್ಯೆ ಮಾಡಿಕೊಳ್ಳವ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು, ‘ನನ್ನ ಮೃತ ದೇಹವನ್ನು ಪೋಸ್ಟ್ ಮಾರ್ಟಂ ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. ನನ್ನ ಪೋಷಕರಿಗೆ ನನ್ನ ಮೃತ ದೇಹ ನೀಡಿ ಎಂದು ಡೆತ್ ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a comment
Log in to write reviews