
ತುಮಕೂರು: ಕಾಲು ಜಾರಿದ ಯುವತಿ ಮೈದಾಳ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಮೈದಾಳದಲ್ಲಿ ನಡೆದಿದೆ.
ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ (19) ಭಾನುವಾರ ರಜೆಯ ಹಿನ್ನೆಲೆ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು. ನಂತರ ಅಲ್ಲಿಯೇ ಸಮೀಪದಲ್ಲಿರುವ ಮೈದಾಳ ಕೆರೆ ಕೋಡಿ ನೋಡಲು ಹೊಗಿದರೆ. ಕೆರೆ ಕೋಡಿ ನೋಡಲು ಹೋದ ಯುವತಿ ಕಾಲು ಜಾರಿ ನೀರಿಗೆ ಬಿದ್ದಿದ್ದು ಸಾವನ್ನಪ್ಪಿದರೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವತಿ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಈ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Poll (Public Option)

Post a comment
Log in to write reviews