
ಬೆಂಗಳೂರು: ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ ನಗರದ ನ್ಯಾಯಾಲಯ ಇಂದು (ಜೂನ್ 25) ಜಾಮೀನು ಮಂಜೂರು ಮಾಡಿದೆ.
ಈ ಸಂಬಂಧ ನೋಟಿಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಸಚಿವ ಉದಯ ನಿಧಿ ಸ್ಟಾಲಿನ್ ಇಂದು ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಮುಂದೆ ಖುದ್ದು ಹಾಜರಾದರು.
ಹಾಜರಾತಿಯನ್ನು ದಾಖಲಿಸಿಕೊಂಡ ನ್ಯಾಯಾಧೀಶರು, ₹5 ಸಾವಿರ ನಗದು ಹಾಗೂ ₹50 ಸಾವಿರ ಮೊತ್ತದ ಆರೋಪಿಯ ವೈಯಕ್ತಿಕ ಬಾಂಡ್ ಮೇರೆಗೆ ಜಾಮೀನು ನೀಡಿದರು. ಅಲ್ಲದೆ ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.
Poll (Public Option)

Post a comment
Log in to write reviews