
ಬೆಂಗಳೂರು: ಪೂರ್ವ ತಾಲ್ಲೂಕು ಕೆ.ಆರ್ ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಸುಮಾರು 700 ಕೋಟಿ ರೂ. ಮೌಲ್ಯದ 9ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಿಸುವಂತೆ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ನಗರದಲ್ಲಿ ಹಸಿರನ್ನು ಹೆಚ್ಚಿಸಲು 1999-2000 ಸಾಲಿನಲ್ಲಿ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.
ಆದರೆ ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ಹಿಂದಿನ ಅಧಿಕಾರಿಗಳು ವಿಫಲರಾಗಿದ್ದರು. ಸದ್ಯ ಅರಣ್ಯ ಇಲಾಖೆಗೆ ಮಂಜೂರಾದ 22.08 ಎಕರೆ ಭೂಮಿಯ ಪೈಕಿ 13 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಸಂಖ್ಯೆ ಆರ್ಎಚ್ಎಸ್ 44/82-83 ಡಿ.ಟಿ. 25.01.2000ರ ಆದೇಶದಂತೆ ಪಹಣಿಯಲ್ಲಿ ನಮೂದಾಗಿದೆ.
Poll (Public Option)

Post a comment
Log in to write reviews