
ಮಂಗಳೂರು : ಖಾಸಗಿ ಬಸ್ಸು ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ, ಲಾರಿ ಚಾಲಕ ಮೃತಪಟ್ಟಿದ್ದು ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ದುರ್ಗಾಂಬಾ ಸಂಸ್ಥೆಯ ಖಾಸಗಿ ಬಸ್ ಹಾಗೂ ಕ್ಯಾಂಟರ್ ವಾಹನದ ನಡುವೆ ಈ ಡಿಕ್ಕಿ ಸಂಭವಿಸಿದೆ.
ಖಾಸಗಿ ಬಸ್ಸು ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತಿತ್ತು. ಕ್ಯಾಂಟರ್ ವಾಹನ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತಿತ್ತು. ಪೆರ್ನೆ ಬಳಿ ಮುಖಾಮುಖಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
Poll (Public Option)

Post a comment
Log in to write reviews