
ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಇಂದು (ಜೂನ್ 25) ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ.
ಶಿರಸಿಯ ಕೆಹೆಚ್‌ಬಿ ಕಾಲೋನಿಯಲ್ಲಿರುವ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಈ ಅವಘಡದಿಂದ ಲಕ್ಷಾಂತರ ಮೌಲ್ಯದ ಜಿಮ್ ವಸ್ತುಗಳು ನಾಶವಾಗಿವೆ ಎಂದು ತಿಳಿದುಬಂದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
Poll (Public Option)

Post a comment
Log in to write reviews