2024-09-19 04:56:53

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಯೋಧ್ಯೆಯ ರಾಮ ಮಂದಿರದ ಮುಖ್ಯ ಅರ್ಚಕರಾದ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ನಿಧನ

ವಾರಾಣಸಿ : ಅಯೋಧ್ಯೆಯ ರಾಮ ಮಂದಿರ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಿದ್ದ ಮುಖ್ಯ ಅರ್ಚಕರಾದ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಇಂದು ನಿಧನರಾಗಿದ್ದಾರೆ.
ಲಕ್ಷ್ಮೀಕಾಂತ್ (86)  ಮಹಾರಾಷ್ಟ್ರದ ಸೋಲಾಪುರ್ ಜಿಲ್ಲೆಯ ಮೂಲದವರಾಗಿದ್ದು, ಅನೇಕ ಪೀಳಿಗೆಯಿಂದ ವಾರಾಣಸಿಯಲ್ಲಿ ನೆಲೆಸಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಮೃತ ಪಟ್ಟಿದ್ದಾರೆ.
ಅವರ ಅಂತ್ಯಕ್ರಿಯೆಯನ್ನು ಮಣಿಕರ್ಣಿಕ ಘಾಟ್ನಲ್ಲಿ ನಡೆಸಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಅಯೋಧ್ಯೆ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಿತ್ತು. ಈ ಆಧ್ಯಾತ್ಮಿಕ ಸಮಾರಂಭದಲ್ಲಿ ವಾರಾಣಸಿಯ ಹಿರಿಯ ಆರ್ಚಕರಾಗಿದ್ದ ದೀಕ್ಷಿತ್ ಭಾಗಿಯಾಗಿದ್ದರು. ಲಕ್ಷ್ಮೀಕಾಂತ್ ದೀಕ್ಷಿತ್ ಅವರು 
ದೀಕ್ಷಿತ್ ಅವರ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಕಾಶಿಯ ದೊಡ್ಡ ಜ್ಞಾನಿಗಳಾಗಿದ್ದಾರೆ. ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಮುಖ್ಯ ಅರ್ಚಕರಾಗಿದ್ದವರು. ಅವರ ನಿಧನವು ಆಧ್ಯಾತ್ಮಿಕ ಮತ್ತು ಸಾಹಿತ್ಯಕ ಕ್ಷೇತ್ರಕ್ಕೆ ನಷ್ಟ ಉಂಟು ಮಾಡಿದೆ. ಭಾರತದ ಸಂಸ್ಕೃತಿ ಮತ್ತು ಸಂಸ್ಕೃತ ಭಾಷೆಗೆ ಅವರು ಸಲ್ಲಿಸಿರುವ ಸೇವೆಯಿಂದಾಗಿ ಅವರು ಚಿರಸ್ಮರಣೆಯಾಗಿರಲಿದ್ದಾರೆ ಎಂದರು.
ಅವರ ಆತ್ಮಕ್ಕೆ ಭಗವಾನ್ ಶ್ರೀರಾಮನಲ್ಲಿ ಶಾಂತಿ ಕೋರುತ್ತೇನೆ. ಅವರ ಕುಟುಂಬಕ್ಕೆ ಮತ್ತು ಬೆಂಬಲಿಗರಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Post a comment

No Reviews