
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ನ್ಯಾಯಂಗ ಬಂಧನದಲ್ಲಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಇನ್ನುಳಿದ ಆರೋಪಿಗಳಿಗೂ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ಕೋರ್ಟ್‌ಗೆ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಆಗಿದ್ದು, ಜುಲೈ 18ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
Poll (Public Option)

Post a comment
Log in to write reviews