
ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಅನಾರೋಗ್ಯದ ಕಾರಣದಿಂದ ಮನೆಯ ಊಟ ಬೇಕು ಎಂದು ಕೇಳಿದ್ದರು. ಅಲ್ಲದೇ, ಬಟ್ಟೆ ಮತ್ತು ಹಾಸಿಗೆಯನ್ನೂ ಮನೆಯಿಂದ ತರಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ಅವರು ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅನುಮತಿ ನೀಡಿಲ್ಲ.
ನಟ ದರ್ಶನ್ ಅವರಿಗೆ ಜೈಲಿನ ಊಟವೇ ಗತಿ ಆಗಿದೆ. ಮನೆ ಊಟ, ಹಾಸಿಗೆ, ಬಟ್ಟೆ ಬೇಕು ಎಂದು ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಮಜಾ ಮಾಡಿದೆ. ಈ ಕುರಿತಂತೆ 24ನೇ ಎಸಿಎಂಎಂ ಕೋರ್ಟ್ ಇಂದು (ಜು.25) ಆದೇಶ ನೀಡಿದೆ. ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ ಎಂದು ಕಾರಣ ನೀಡಿ ದರ್ಶನ್ ಅವರು ಮನೆಯ ಊಟ ತರಿಸಲು ಅನುಮತಿ ಕೇಳಿದ್ದರು. ಜೈಲು ಅಧಿನಿಯಮ ಉಲ್ಲೇಖಿಸಿ ದರ್ಶನ್‌ರ ವಕೀಲರು ವಾದ ಮಂಡಿಸಿದ್ದರು. ಇದಕ್ಕೆ ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು. ಇನ್ನೂ ಹಲವು ದಿನಗಳ ಕಾಲ ದರ್ಶನ್ ಜೈಲೂಟ ಮಾಡುವುದು ಅನಿವಾರ್ಯ ಆಗಿದೆ.
ಜೈಲೂಟದಿಂದ ದರ್ಶನ್‌ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲವೆಂದು ಆಕ್ಷೇಪಣೆ ಸಲ್ಲಿಸಲಾಗಿತ್ತು. ಎರಡೂ ಕಡೆ ವಾದ ಆಲಿಸಿರುವ ಜಡ್ಜ್ ವಿಶ್ವನಾಥ್ ಸಿ ಗೌಡರ್ ಈಗ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
Poll (Public Option)

Post a comment
Log in to write reviews