2024-12-24 05:40:02

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರೋ ನಟ ದರ್ಶನ್‌ಗೆ ತಪ್ಪದ ಕಂಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಬಂಧಿತರಾದ ದರ್ಶನ್‌ ಈಗ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದಾರೆ. ಆದರೆ ಇವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ದರ್ಶನ್‌ ವಿರುದ್ಧ ಹಳೆಯ ಪ್ರಕರಣವೊಂದಕ್ಕೆ ಮರು ಜೀವ ದೊರಕಿದೆ. ಕೆಲವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕರೊಬ್ಬರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಆ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಂತಿದೆ. 2022 ರಲ್ಲಿ ಪ್ರಕರಣ ದಾಖಲಾಗಿತ್ತು, ಈಗ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್​ಸಿಆರ್‌ ದಾಖಲಾಗಿದೆ.
ಯುವ ನಿರ್ಮಾಪಕ ಭರತ್ ಎಂಬುವರು ತಮಗೆ ಕರೆ ಮಾಡಿ ದರ್ಶನ್‌ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಕರೆ ಮಾಹಿತಿ, ಕಾಲ್‌ ರೆಕಾರ್ಡ್​ಗಳನ್ನು ಸಹ ಆಗ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದರು. 2022 ರಲ್ಲಿ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಎನ್​ಸಿಆರ್‌ ದಾಖಲಾಗಿತ್ತು. 
ಯುವ ನಿರ್ಮಾಪಕ ಭರತ್, ‘ಭಗವಾನ್‌ ಶ್ರೀ ಕೃಷ್ಣಾ’ ಹೆಸರಿನ ಸಿನಿಮಾ ಪ್ರಾರಂಭ ಮಾಡಿದ್ದರು. ಸಿನಿಮಾಕ್ಕೆ ಧ್ರುವ ನಾಯಕ ನಟನಾಗಿದ್ದರು. ಆದರೆ ಕೋವಿಡ್‌ ಬಂದ ಕಾರಣಕ್ಕೆ ಸಿನಿಮಾದ ಚಿತ್ರೀಕರಣ ನಿಂತು ಹೋಯ್ತು. ಬಳಿಕ ಧ್ರುವನ್, ದರ್ಶನ್‌ ಬಳಿ ಹೋಗಿ ಅವರ ಕೈಯಿಂದ ಭರತ್​ಗೆ ಕರೆ ಮಾಡಿಸಿದ್ದರು. ಆಗ ಭರತ್‌ ಬಿಡುಗಡೆ ಮಾಡಿದ್ದ ಆಡಿಯೋ ರೆಕಾರ್ಡ್​ನಲ್ಲಿದ್ದಂತೆ, ಆರಂಭದಲ್ಲಿ ಕೂಲ್ ಆಗಿಯೇ ಮಾತನಾಡಿದ್ದ ದರ್ಶನ್, ‘ಧ್ರುವ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ’ ಎಂದು ಮನವಿ ಮಾಡಿದ್ದರು. ಆದರೆ ಮಾತು ಮುಂದುವರೆದಂತೆ, ‘ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ಇಲ್ಲದಂತೆ ಮಾಡಿ ಬಿಡುತ್ತೇನೆ’ ಎಂದೆಲ್ಲ ಬೆದರಿಕೆ ಹಾಕಿದ್ದರು. ಕೆಲವು ಅವಾಚ್ಯ ಶಬ್ದಗಳನ್ನು ಸಹ ದರ್ಶನ್‌ ಬಳಸಿದ್ದರು.
ಆಗ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಭರತ್‌ ದೂರು ದಾಖಲಿಸಿದ್ದರು. ಆಗ ಎನ್​ಸಿಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ಧ್ರುವನ್, ದರ್ಶನ್‌ ವಿರುದ್ಧ ಯಾವುದೇ ಕ್ರಮಕೈಗೊಂಡಿರಲಿಲ್ಲ. ಆದರೆ ಈಗ ಧೃವನ್ ಅಲಿಯಾಸ್ ಸೂರಜ್ ಕುಮಾರ್, ನಟ ದರ್ಶನ್, ದರ್ಶನ್ ಮ್ಯಾನೇಜರ್ ನಾಗರಾಜ್ ವಿರುದ್ಧ ಮತ್ತೆ ಎನ್‌ಸಿಆರ್ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುವ ಸಾಧ್ಯತೆ ಇದೆ. ತನಿಖೆ ನಡೆಸಲೆಂದೇ ಹೊಸದಾಗಿ ಎನ್​ಸಿಆರ್‌ ಮಾಡಿದ್ದಾರೆ ಎನ್ನಲಾಗುತ್ತಿದೆ.

Post a comment

No Reviews