ಕರ್ನಾಟಕ
ಚಿತ್ರದುರ್ಗಕ್ಕೆ ನಟ ಧ್ರುವ ಸರ್ಜಾ ಭೇಟಿ : ಮೆಚ್ಚಿನ ನಟನ ಕಾಣಲು ಮುಗಿಬಿದ್ದ ಅಭಿಮಾನಿಗಳು

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಮುರುಘಾ ಮಠಕ್ಕೆ ನಟ ಧ್ರುವ ಸರ್ಜಾ ಭೇಟಿ ನೀಡಿ, ಮುರುಘಾ ಶರಣರ ಗದ್ದುಗೆಯ ದರ್ಶನ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಮುರುಘಾ ಮಠಕ್ಕೆ ಭೇಟಿ ಕೊಟ್ಟು, ಶ್ರೀಗಳ ಗದ್ದೆಗೆಯ ಆಶೀರ್ವಾದ ಪಡೆದಿದ್ದೇನೆ. ಮುಂಬೈನಲ್ಲಿ ಮಾರ್ಟಿನ್ ಸಿನಿಮಾದ ಟೈಲರ್ ಲಾಂಚ್ ಮಾಡಲಾಗುತ್ತಿದೆ. ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸುತ್ತೇವೆ. ಸುದ್ದಿಗೋಷ್ಠಿಯಲ್ಲಿ ಅಂತರಾಷ್ಟ್ರೀಯ ಪತ್ರಕರ್ತರು ಭಾಗಿಯಾಗಲಿದ್ದಾರೆ ಎಂದರು.ಮಾರ್ಟಿನ್ ಸಿನಿಮಾ ನೋಡಿ ಹರಸಿ' ಎಂದು ಧ್ರುವ ಸರ್ಜಾ ಅಭಿಮಾನಿಗಳಲ್ಲಿ ಮನವಿ ಮಾಡಿದರು.
ಮುರುಘಾ ಮಠಕ್ಕೆ ನಟ ಧ್ರುವ ಸರ್ಜಾ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ನೆಚ್ಚಿನ ನಟನನ್ನು ನೋಡಿ ಮಾತನಾಡಿಸಿ ಶಿಳ್ಳೆ, ಚಪ್ಪಾಳೆ, ಕೇಕೆ ಹಾಕಿ ಖುಷಿ ಪಟ್ಟರು. ನಟ ಧ್ರುವ ಸರ್ಜಾ ಆಗಮನ ಹಿನ್ನೆಲೆಯಲ್ಲಿ ಮುರುಘಾ ಮಠದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
Poll (Public Option)

Post a comment
Log in to write reviews