
ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಮಂಗಳವಾರ (ಮೇ 21) ತಡರಾತ್ರಿ ಅಹಮದಾಬಾದ್‌ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿತ್ತು.
ಶಾರುಖ್ ಖಾನ್ ಅವರು ಆಸ್ಪತ್ರೆಗೆ ದಾಖಲಾಗಿರುವುದನ್ನು ಆಸ್ಪತ್ರೆ ಮೂಲಗಳು ಖಚಿತಪಡಿಸಿದವು. ಆದರೆ ಯಾವ ಕಾರಣಕ್ಕಾಗಿ ಅವರು ಅಡ್ಮಿಟ್ ಆಗಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ, ಡಿಹೈಡ್ರೇಷನ್ ಮತ್ತು ಹೀಟ್ ಸ್ಟ್ರೋಕ್ ಕಾರಣದಿಂದ ಶಾರುಖ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಗುಜರಾತ್‌ನಲ್ಲಿ ಈಗ ಬಿಸಿಗಾಳಿ ಬೀಸುತ್ತಿದೆ, ಆ ಕಾರಣಕ್ಕಾಗಿ ಅವರು ಆರೋಗ್ಯ ಸಮಸ್ಯೆಗೆ ಒಳಗಾಗಿದ್ದರು. ಸದ್ಯ ಚಿಕಿತ್ಸೆ ಪಡೆದು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಲಾಗಿದೆ.
Poll (Public Option)

Post a comment
Log in to write reviews