
ಬೆಂಗಳೂರು: ಟಾಲಿವುಡ್‌ನ ಅಲ್ಲು ಅರ್ಜುನ್ ಮತ್ತು ನಟಿ ರಶ್ಮಿಕಾ ಮಂದಣ್ಣ ನಟನೆಯ ʼಪುಷ್ಪಾ: ದಿ ರೈಸ್ʼ ಸಿನಿಮಾ ಭಾರತದಾದ್ಯಂತ ಹಿಟ್ ಆಗಿತ್ತು. . ಸಮಂತಾ ರುತ್ ಪ್ರಭು ಅವರು ಡ್ಯಾನ್ಸ್ ಮಾಡಿದ್ದ ‘ಉ ಅಂಟಾವಾ ಮಾವ, ಉಊ ಅಂಟಾವಾ ಮಾವ..’ ಹಾಡು ಸೂಪರ್ ಹಿಟ್ ಆಗಿತ್ತು. ಈಗ ಎರಡನೇ ಪಾರ್ಟ್ನಲ್ಲಿ ಯಾರು ಹೆಜ್ಜೆ ಹಾಕಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ‘ಪುಷ್ಪ 2’ ಸಿನಿಮಾದಲ್ಲಿ ಬಾಲಿವುಡ್ ನಟಿ ಜಾನ್ಹವಿ ಕಪೂರ್ ಐಟಂ ಸಾಂಗ್ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಜಾನ್ವಿ ಜೊತೆಗೆ ಕನ್ನಡದ ನಟಿ ಶ್ರೀಲೀಲಾ ಹೆಸರು ಕೂಡ ಚರ್ಚೆಗೆ ಬಂದಿದೆ. ಆದರೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.
ಶ್ರೀಲೀಲಾ ಅವರು ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಟಾಲಿವುಡ್ನಲ್ಲೂ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಸಿನಿಮಾದಲ್ಲಿನ ಸ್ಪೆಷಲ್ ಸಾಂಗ್‌ಗೆ ಶ್ರೀಲೀಲಾ ಡ್ಯಾನ್ಸ್ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ‘ಸೀಕ್ವೆಲ್ನಲ್ಲಿ ಆ ಅವಕಾಶ ಶ್ರೀಲೀಲಾ ಪಾಲಾಗಿದೆ ಎನ್ನಲಾಗುತ್ತಿದೆ.‘ಪುಷ್ಪ 2’ ಸಿನಿಮಾದಲ್ಲಿ ಏನೆಲ್ಲಾ ಡಿಫರೆಂಟ್ ಆಗಲಿದೆ ಎಂದು ಅಭಿಮಾನಿಗಳು ಕೂಡ ಕಾತರರಾಗಿದ್ದಾರೆ. ಅಭಿಮಾನಿಗಳ ಮನದಲ್ಲಿ ಸಿನಿಮಾದ ಕುತೂಹಲ ಮುಗಿಲು ಮುಟ್ಟಿದೆ.
2021ರಲ್ಲಿ ತೆರೆಕಂಡು ಬಾಕ್ಸ್ ಆಫೀಸ್‌ನಲ್ಲಿ ಮ್ಯಾಜಿಕ್ ಮಾಡಿದ್ದ ಪ್ಯಾನ್ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್ ಆಗಿದೆ. ಎರಡನೇ ಹಾಡು ಕೂಡ ಔಟ್ ಆಗಿದ್ದು, ಅಲ್ಲು ಅರ್ಜುನ್ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರ ವೀಕ್ಷಣೆ ಪಡೆದುಕೊಂಡಿದೆ.
Poll (Public Option)

Post a comment
Log in to write reviews