
ತಮಿಳುನಾಡು: ತಮಿಳಿನ ಖ್ಯಾತ ನಟಿ ವರಲಕ್ಷ್ಮಿ ಶರತ್‌ಕುಮಾರ್ ಬಹುಕಾಲದ ಗೆಳೆಯನ ಜೊತೆ ಜುಲೈ 2ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇಬ್ಬರ ವಿವಾಹ ಥೈಲ್ಯಾಂಡ್‌ನಲ್ಲಿ ಅದ್ಧೂರಿಯಾಗಿ ಜರುಗಲಿದೆ. ಈ ವಿವಾಹ ಮಹೋತ್ಸವಕ್ಕೆ ತಮಿಳಿನ ಸ್ಟಾರ್ ಕಲಾವಿದರ ದಂಡೇ ಸಾಕ್ಷಿಯಾಗಲಿದೆ.
ಹಿರಿಯ ನಟ ಶರತ್‌ಕುಮಾರ್ ಮತ್ತು ರಾಧಿಕಾ ದಂಪತಿ ಪುತ್ರಿ ವರಲಕ್ಷ್ಮಿ ವಿವಾಹ ಪೂರ್ವ ಕಾರ್ಯಕ್ರಮಗಳು ಸಂಭ್ರಮದಿಂದ ನಡೆಯುತ್ತಿದೆ. ಜುಲೈ 2ರಂದು ಥೈಲ್ಯಾಂಡ್‌ನಲ್ಲಿ ಉದ್ಯಮಿ ನಿಕೋಲಾಯ್ ಜೊತೆ ವರಲಕ್ಷ್ಮಿ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ.
ಈ ಮದುವೆ ಸಂಭ್ರಮಕ್ಕೆ ಸಾಕ್ಷಿಯಾಗಲು ಸ್ಟಾರ್ ನಟಿ ನಯನತಾರಾ ದಂಪತಿ, ರವಿತೇಜ, ತಮಿಳು ನಟ ಸಿದ್ಧಾರ್ಥ್, ಎ.ಆರ್ ಮುರುಗದಾಸ್, ಮುರಳಿ ಶರ್ಮಾ, ಸಮಂತಾ, ಕನ್ನಡದ ನಟ ಸುದೀಪ್ ಸೇರಿದಂತೆ ಅನೇಕರಿಗೆ ನಟಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಅದಷ್ಟೇ ಅಲ್ಲ, ಪಿಎಂ ನರೇಂದ್ರ ಮೋದಿಗೂ ನಟಿಯ ಕುಟುಂಬ ವಿಶೇಷವಾಗಿ ಆಮಂತ್ರಣ ನೀಡಿದೆ.
Poll (Public Option)

Post a comment
Log in to write reviews