ಬೆಂಗಳೂರು: ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ದಸರಾ ರಜೆ ಗಮನದಲ್ಲಿಟ್ಟುಕೊಂಡು ಅಕ್ಟೋಬರ್ 9-ಅಕ್ಟೋಬರ್ 12ರ ನಡುವೆ 2,000 ಹೆಚ್ಚುವರಿ ಬಸ್ ಕಾರ್ಯಾಚರಣೆಯನ್ನು ಕೆಎಸ್‌ಆರ್‌ಟಿಸಿ ಪ್ರಕಟಿಸಿದೆ. ಇದಲ್ಲದೆ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ‘ಫ್ಲೈ ಬಸ್’ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದ್ದು, ಮೈಸೂರಿನಲ್ಲಿ ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ವಿಶೇಷ ಪ್ರವಾಸ ಕಾರ್ಯಾಚರಣೆ ಆರಂಭಿಸಿದೆ.
ಇನ್ನೂ ಕಳೆದ ವರ್ಷಕ್ಕಿಂತ ಈ ಬಾರಿ ಅದ್ದೂರಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಹಬ್ಬ ಆಚರಿಸಲಾಗುತ್ತಿದೆ. ಮೈಸೂರು ಮಾತ್ರವಲ್ಲ, ಶ್ರೀರಂಗಪಟ್ಟಣ, ರಾಯಚೂರು, ಚಿಕ್ಕಮಗಳೂರು ಹೀಗೆ ಹಲವು ಕಡೆಗಳಲ್ಲಿ ನಾಡಹಬ್ಬವನ್ನ ಆಚರಣೆ ಮಾಡಲಾಗ್ತಿದೆ. ನಾಡಹಬ್ಬ ದಸರಾ ಮಕ್ಕಳಿಗೆ ಶಾಲಾ ಕಾಲೇಜು ರಜಾಗಳಿದ್ದು,. ಹಲವೆಡೆ ತೆರಳೋದಕ್ಕೆ ಸಕಲ ಸಿದ್ಧತೆ ಮಾಡ್ಕೊಂಡಿದ್ದಾರೆ. ಹಾಗೆಯೇ ಹೊರಡೋದಕ್ಕೆ ಸಿದ್ಧವಾಗಿರೋ ಜನಕ್ಕಾಗಿ ಕರ್ನಾಟಕ ಸಾರಿಗೆ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 9 ರಿಂದ ಅಕ್ಟೋಬರ್ 12 ರವರೆಗೆ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
Post a comment
Log in to write reviews