
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ ಹೈಕೋರ್ಟ್ ಜಾಮೀನು ಮಂಜೂರು ಆದೇಶಿಸಿದೆ.
ದೇವರಾಜೇ ಗೌಡ ಅವರು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ಪೀಠ ಜಾಮೀನು ನೀಡಿ ಇಂದು ಆದೇಶಿಸಿದೆ. ಹಿಂದೆ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ದೇವರಾಜೇ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದನ್ನು ಪ್ರಶ್ನಿಸಿ ದೇವರಾಜೇಗೌಡ ಅವರು ಹೈಕೋರ್ಟ್‌ಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದು ಇದೀಗ ಜಾಮೀನು ಮಂಜೂರು ಆಗಿದೆ.
Poll (Public Option)

Post a comment
Log in to write reviews