ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಭದಿಸಿದಂತ್ತೆ 2ನೇ ಬಾರಿ ವಿಚಾರಣೆ ಹಾಜರಾದ ಚಿಕ್ಕಣ್ಣ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ನಟ ಚಿಕ್ಕಣ್ಣ ಇಂದು (ಆ.29) ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ.
ವಿಚಾರಣೆಯ ಬಳಿಕ ಮಾತನಾಡಿದ ಚಿಕ್ಕಣ್ಣ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೋತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್ ಭೇಟಿ ಮಾಡಿ ಬಂದಿದ್ದೆ. ಹಾಗಾಗಿ ವಿಚಾರಣೆಗೆ ಬರುವಂತೆ ಆಗಸ್ಟ್.28 ನೋಟಿಸ್ ಕೊಟ್ಟಿದ್ದರು. ಬೆಳಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಡಲಾಗಿತ್ತು. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗಿದ್ದೇನೆ. ವಿಚಾರಣೆಯ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರ ಬಗ್ಗೆ ಒಂದಷ್ಟು ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರ ಕೊಟ್ಟಿದ್ದೀನೆ. ಮತ್ತೆ ಅವರು ವಿಚಾರಣೆಗೆ ಕರೆದರೆ ಬರುತ್ತೇನೆ. ಸದ್ಯ ವಿಚಾರಣೆಗೆ ಬರುವುದಕ್ಕೆ ಹೇಳಿಲ್ಲ. ಸಾಕ್ಷಿದಾರ ಹೋಗಬಾರದು ಅನ್ನೋದು ನನಗೆ ತಿಳಿದಿರಲಿಲ್ಲ. ಗೊತ್ತಿದ್ದರೆ ಹೋಗಿ ದರ್ಶನ್‌ರನ್ನು ಜೈಲಿನಲ್ಲಿ ಭೇಟಿ ಆಗುತ್ತಿರಲಿಲ್ಲ ಎಂದು ಹೇಳಿದ್ದರು.
Poll (Public Option)

Post a comment
Log in to write reviews