ಆಗಸ್ಟ್ 22 ರಿಂದ 31 ರವರೆಗೆ ಅಗ್ನಿಪಥ ಸೇನಾ ನೇಮಕಾತಿ ರ‍್ಯಾಲಿ - Agnipath Recruitment

ಧಾರವಾಡ: ಪ್ರಸಕ್ತ 2024ರ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಗ್ನಿಪಥ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ರ‍್ಯಾಲಿ ನಡೆಯಲಿದೆ.
ಇದೇ ಆಗಸ್ಟ್ 22 ರಿಂದ ಆಗಸ್ಟ್ 31ರವರೆಗೆ ಶಿವಮೊಗ್ಗದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಆಯೋಜಿಸಲಾಗಿದೆ. ಇದಕ್ಕೆ ಶಿವಮೊಗ್ಗ, ದಾವಣಗೆರೆ, ಗದಗ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ವಿಜಯಪುರ, ಧಾರವಾಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರ ಇರಲಿದೆ. ಈ ಸಂಬಂಧ ಆಹ್ವಾನಿಸಿ ಈಗಾಗಲೇ ಅಭ್ಯರ್ಥಿಗಳ ಇಮೇಲ್‌ಗೆ ಮಾಹಿತಿ ಕಳುಹಿಸಲಾಗಿದೆ ಎಂದು ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು (ಪ್ರಭಾರ) ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
Poll (Public Option)

Post a comment
Log in to write reviews