
ಕಲಬುರಗಿ: ಏರ್ ಪೋರ್ಟ್‌ನ ಟರ್ಮಿನಲ್ ಕಟ್ಟಡದಲ್ಲಿ ಬಾಂಬ್ ಇರಿಸಿ ಏರ್ಪೋರ್ಟ್ ಸ್ಫೋಟಿಸುವುದಾಗಿ ಇ ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ.
ಅನಾಮಧೇಯ ವ್ಯಕ್ತಿಯೊಬ್ಬನಿಂದ ಕಲಬುರಗಿ ವಿಮಾನ ನಿಲ್ದಾಣದ ಕಚೇರಿಗೆ ಇ-ಮೇಲ್ ಬಂದಿದ್ದು, ತಕ್ಷಣವೇ ವಿಮಾನ ನಿಲ್ದಾಣಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಭದ್ರತಾ ಪಡೆ ಆಗಮಿಸಿ ಶೋಧನಾ ಕಾರ್ಯ ನಡೆಸುತ್ತಿದ್ದಾರೆ. ಬೆಂಗಳೂರಿಗೆ ಹೋಗುವ ವಿಮಾನವನ್ನು ರದ್ದು ಮಾಡಲಾಗಿದೆ. ಅಲ್ಲದೆ ಬಾಂಬ್ ಬೆದರಿಕೆ ಹಿನ್ನಲೆ ಪ್ರಯಾಣಿಕರನ್ನು ನಿಲ್ದಾಣದ ಹೊರಕ್ಕೆ ಕಳುಹಿಸಲಾಗಿದೆ. ಏರ್ಪೋರ್ಟ್ ಸುತ್ತಲೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಏರ್‌ಪೋರ್ಟ್‌ನ ಇಂಚಿಂಚು ಸ್ಥಳ ಪರಿಶೀಲನೆ ನಡೆಸ್ತಿದ್ದಾರೆ.
Poll (Public Option)

Post a comment
Log in to write reviews