
ಚೆನ್ನೈ: ತಮಿಳುನಾಡಿಗೆ ಕಾವೇರಿ ನೀರಿನ ಪ್ರಮಾಣ ಕಡಿಮೆ ಮಾಡಿರುವ ಕರ್ನಾಟಕ ಸರ್ಕಾರದ ನಿಲುವನ್ನು ಖಂಡಿಸಿದ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ನಿರ್ಧರಿಸಲು, ಇಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಸಿಎಂ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.
ಪ್ರಸ್ತುತದಲ್ಲಿನ ನೈರುತ್ಯ ಮುಂಗಾರು ಹಾಗೂ ಕರ್ನಾಟಕದ ಅಣೆಕಟ್ಟುಗಳಲ್ಲಿ ಒಳಹರಿವು ಹೆಚ್ಚಳ ಪರಿಗಣಿಸಿ ಈ ಮಾಸಾಂತ್ಯದವರೆಗೂ ಪ್ರತಿದಿನ ಒಂದು ಟಿಎಂಸಿ ಅಡಿ ಬಿಡುಗಡೆ ಮಾಡಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ನಿರ್ದೇಶನ ನೀಡಿದೆ. ಆದರೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿರುವುದು ಆಘಾತಕಾರಿಯಾಗಿದೆ. ಈ ನಿರ್ದೇಶನವನ್ನು ಕೂಡಲೇ ಜಾರಿಗೊಳಿಸುವಂತೆ ಕೋರಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. ಸಮಿತಿ ಆದೇಶವನ್ನು ಕರ್ನಾಟಕ ಪಾಲಿಸದಿರುವುದು ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.
Poll (Public Option)

Post a comment
Log in to write reviews