ಚಿಕ್ಕೋಡಿ: ಚುನಾವಣೆ ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ತಿಳಿಸಿದರು.
ಮತ ಎಣಿಕಾ ಕೇಂದ್ರವಾದ ಚಿಕ್ಕೋಡಿಯ ಆರ್.ಡಿ.ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ 8 ಇವಿಎಂ ಕೌಂಟಿಂಗ್ ಕೇಂದ್ರಗಳನ್ನು ಸ್ಥಾಪಿಸಲಾದೆ. ಪ್ರತಿ ಮತ ಎಣಿಕಾ ಕೇಂದ್ರದಲ್ಲಿ 12 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದೆ. ಅಂಚೆ ಮತಗಳ ಎಣಿಕೆಗಾಗಿ 16 ಟೇಬಲ್ ಹಾಗೂ ಇಟಿಪಿಬಿಎಸ್ ಮತಗಳ ಎಣಿಕೆಗಾಗಿ 2 ಕೇಂದ್ರ ಸ್ಥಾಪಿಸಲಾಗಿದೆ ಎಂದರು.
ಮತ ಎಣಿಕೆಗಾಗಿ ಹೆಚ್ಚುವರಿ ಸಿಬ್ಬಂದಿಗಳು ಸೇರಿದಂತೆ ಒಟ್ಟು 139 ಜನ ಕೌಂಟಿಂಗ ಸೂಪರವೈಸರ್, 158 ಜನ ಕೌಂಟಿಂಗ್ ಅಸಿಸ್ಟಂಟ್ ಹಾಗೂ 139 ಜನ ಮೈಕ್ರೊ ಆಬ್ಸರ್ ವರ್ಗಳನ್ನು ಹಾಗೂ 40 ಜನ ಇಟಿಪಿಬಿಎಸ್ ಮತಗಳ ಸ್ಕ್ಯಾನಿಂಗ್ ಪ್ರಕ್ರಿಯೆಗೆ ಸಿಬ್ಬಂದಿಗಳನ್ನು ನಿಯೋಜಿಸಿ ತರಬೇತಿ ನೀಡಲಾಗಿದೆ. 514 ಪೋಲಿಸ್ ಅಧಿಕಾರಿ ಸಿಬ್ಬಂದಿ , 2 ಕೆಎಸ್ಆರ್ ಪಿ ತುಕಡಿ ಹಾಗೂ 4 ಡಿಆರ್ ತುಕುಡಿ ನಿಯೋಜಿಸಲಾಗಿದೆ. ಮತ ಎಣಿಕಾ ಏಜೆಂಟರು ಯಾವುದೇ ಕಾರಣಕ್ಕೂ ಮೊಬೈಲ್ ಅನ್ನು ಮತ ಎಣಿಕಾ ಕೇಂದ್ರದೊಳಗೆ ತರಲು ಅವಕಾಶವಿರುವುದಿಲ್ಲ ಎಂದರು.
ಒಟ್ಟಾರೆಯಾಗಿ ಮತ ಎಣಿಕೆ ಕಾರ್ಯ ಶಾಂತ, ಮುಕ್ತ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷವಾಗಿ ಜರುಗಿಸಲು ಅಧಿಕಾರಿ, ಸಿಬ್ಬಂದಿಗಳಿಗೆ ನಿರ್ದೆಶನ ನೀಡಲಾಗಿದೆ. ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
Post a comment
Log in to write reviews