
ಬೆಳ್ತಂಗಡಿ: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದೆ.
ಆಗಸ್ಟ್ 19ರಂದು ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಅದೇ ಗತಿ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು.
ಇದೀಗ ರಕ್ಷಿತ್ ಶಿವರಾಂ ಅವರ ಹೇಳಿಕೆಯನ್ನು ವಿರೋಧಿಸಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ರಾಷ್ಟ್ರ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ದೂರು ನೀಡಲಾಗಿದೆ.
Poll (Public Option)

Post a comment
Log in to write reviews