2024-09-19 05:01:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ 

ಹಾಸನ : ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯ ಹಂತದಲ್ಲಿರುವಾಗಲೇ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ ಆರೋಪ ಮಾಡಿದ ಯುವಕನ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಜ್ವಲ್ ರೇವಣ್ಣ ಅವರ ಅಣ್ಣ, ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರ ವಿರುದ್ಧವೂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದ್ದು, ಅರಕಲಗೂಡು ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ ಅವರು ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. 
ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನಿಗೆ ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಲ್ಲಿ ಯುವಕ ಉಲ್ಲೇಖಿಸಿದ್ದಾನೆ. ಆದರೆ ಆರೋಪ ಮಾಡಿರುವ ವ್ಯಕ್ತಿಯ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ. ಅರಕಲಗೂಡು ಮೂಲದ ಕಾರ್ಯಕರ್ತ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಡಾ.ಸೂರಜ್ ರೇವಣ್ಣ ಪರ ಶಿವಕುಮಾರ್ ಎಂಬುವವರು ದೂರು ನೀಡಿದ್ದಾರೆ.

Post a comment

No Reviews