ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್
ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ ಮಟನ್ ಮಾಂಸದ ಬಾಕ್ಸ್ಗಳನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಿಂದೂ ಕಾರ್ಯಕರ್ತರು ತಡೆ ಹಿಡಿದಿದ್ದಾರೆ. ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ತಡೆದು ಪ್ರತಿಭಟನೆ ನಡೆಸಲಾಗಿದೆ.
ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ರೈಲ್ವೆ ನಿಲ್ದಾಣದ ಬಳಿ ದಾಳಿ ಮಾಡಿ, ಇದರಲ್ಲಿ ನಾಯಿ ಮಾಂಸ ಇದೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಮಾಂಸ ಸಾಗಾಟ ಮಾಡುತ್ತಿರೋ ವ್ಯಾಪಾರಿ ಅಬ್ದುಲ್ ರಜಾಕ್ ಮತ್ತು ಪುನೀತ್ ಕೆರೆಹಳ್ಳಿ ಮಧ್ಯೆ ವಾಗ್ವಾದ ನಡೆದಿದ್ದು, ಕೆಲಹೊತ್ತು ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಳಿಕ ಸ್ಥಳಕ್ಕೆ ಬಂದ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೋಲಿಸರು ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ ಪುನೀತ್ ಕೆರೆಹಳ್ಳಿ ಪೋಲಿಸರ ಜೊತೆಯೂ ವಾಗ್ವಾದಕ್ಕಿಳಿದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಕಾರಣಕ್ಕೆ ಪುನೀತ್ ಕೆರೆಹಳ್ಳಿಯನ್ನು ಅರೆಸ್ಟ್ ಮಾಡಲಾಗಿದೆ. 132 BNS (2)ರ ಅಡಿಯಲ್ಲಿ ಪುನೀತ್ ಕೆರೆಹಳ್ಳಿ ಮೇಲೆ ಕೇಸ್ ದಾಖಲಿಸಲಾಗಿದೆ.
ಪೋಲಿಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಕೇಸ್ ದಾಖಲಿಸಲಾಗಿದ್ದು, ಪುನೀತ್ ಕೆರೆಹಳ್ಳಿಯನ್ನು ಮಧ್ಯರಾತ್ರಿ 12 ಗಂಟೆಗೆ ಕಾಟನ್ಪೇಟೆ ಠಾಣೆ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ರಾತ್ರಿ ಸುಮಾರಿಗೆ ಪುನೀತ್ ಕೆರೆಹಳ್ಳಿ ಅಸ್ವಸ್ಥವಾಗಿದ್ದು, ಕೂಡಲೇ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಕೆ.ಸಿ.ಜನರಲ್ ಆಸ್ಪತ್ರೆಯಿಂದ ಪುನೀತ್ ಕೆರೆಹಳ್ಳಿ ಅಸ್ವಸ್ಥತೆ ಕಾರಣ ವಿಕ್ಟೋರಿಯಾಗೆ ರವಾನೆ ಮಾಡಲಾಗಿದೆ.
ಇನ್ನು ಜೈಪುರಿಂದ ಬಂದ ಮಾಂಸದ ಬಗ್ಗೆ ವಾಗ್ದಾದ ನಡೆದಿರುವ ವಿಷಯ ತಿಳಿದು ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಯಾಗಿ ಭೇಟಿ ನೀಡಿ ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್ ಗಳನ್ನು ಓಪನ್ ಮಾಡಿ ಪರಿಶೀಲನೆ ಮಾಡಿದ್ದಾರೆ. ಗುಣಮಟ್ಡ ಹಾಗೂ ಮಾಂಸ ದೃಢೀಕರಣಕ್ಕಾಗಿ ಸ್ಯಾಂಪಲ್ ಪಡೆದುಕೊಂಡಿದ್ದಾರೆ.
Post a comment
Log in to write reviews