ನವದೆಹಲಿ : ಕಾಶ್ಮೀರ ಭಾಗದಂತೆ ಜಮ್ಮುವಿನಲ್ಲೂ ಶೂನ್ಯ ಭಯೋತ್ಪಾದನೆ ಕ್ರಮ ಜಾರಿಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರತಾ ಪಡೆ ಅಧಿಕಾರಿಗಳಿಗೆ ಆದೇಶ ನೀಡಿದರು.
ಜಮ್ಮು-ಕಾಶ್ಮೀರದ ಭಾಗದಲ್ಲಿ ಇತ್ತೀಚಿಗೆ ನಡೆದ ಸರಣಿ ಭಯೋತ್ಪಾದಕ ಘಟನೆ ಹಿನ್ನಲೆಯಲ್ಲಿ ಅಮಿತ್ ಶಾ ಅವರು ಭಾನುವಾರ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅಮಿತ್ ಶಾ, ಪ್ರದೇಶ ಪ್ರಾಬಲ್ಯ ಯೋಜನೆ ಮತ್ತು ಶೂನ್ಯ ಭಯೋತ್ಪಾದನಾ ಯೋಜನೆ ಮೂಲಕ ಕಾಶ್ಮೀರ ಕಣಿವೆಯಲ್ಲಿ ಸಾಧಿಸಿದ ಯಶಸ್ಸನ್ನು ಜಮ್ಮು ವಿಭಾಗದಲ್ಲಿ ಪುನರಾವರ್ತಿಸಬೇಕು ಎಂದು ಭದ್ರತಾ ಅಧಿಕಾರಿಗಳಿಗೆ ನಿರ್ದೇಶಿಸಿದರು.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರದ ಲೆ.ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Post a comment
Log in to write reviews