ಬೆಂಗಳೂರು, ಅ.07: ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಇಂದು(ಸೋಮವಾರ) ನಡೆದಿದೆ. ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ(50) ಮೃತ ದುರ್ದೈವಿ. ಮನೆ ಬಳಿ ನಿಂತಿದ್ದಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದು, ದುರ್ಘಟನೆ ನಡೆದಿದೆ. ಸಧ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a comment
Log in to write reviews