
ಧಾರವಾಡ: ರೈತರ ಜಾತ್ರೆ ಎಂದೇ ಕರೆಸಿಕೊಳ್ಳುವ ಉತ್ತರ ಕರ್ನಾಟಕ ಭಾಗದಲ್ಲಿ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ಕೃಷಿಮೇಳಕ್ಕೆ ಜನರು, ರೈತರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಎರಡನೇ ದಿನವಾದ ನಿನ್ನೆ(ಭಾನುವಾರ) ಮೇಳಕ್ಕೆ ಅಧಿಕೃತ ಚಾಲನೆ ದೊರೆಯಿತು ಎನ್ನಲಾಗಿದೆ.
ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೇರಿ ಇನ್ನೂ ಸಾವಿರಾರು ಜನರು ಕೃಷಿಮೇಳಕ್ಕೆ ಆಗಮಿಸಿ ತಮಗಿಷ್ಟವಾದ ಹೂವುಗಳ ಕಲಾಕೃತಿಗಳ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು ವಿವಿಧ ಬಗೆಯ ಹೂವುಗಳನ್ನು ನೋಡಿ ಕಣ್ತುಂಬಿಕೊಂಡು ಖುಷಿಪಟ್ಟರು.
ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರಗಳು ಹಾಗೂ ಕಲ್ಲಂಗಡಿಯಲ್ಲಿ ಅರಳಿದ ಕ್ರಾಂತಿಕಾರಿಗಳು ಮತ್ತು ತರಕಾರಿಗಳಿಂದ ಮೂಡಿಬಂದ ಕಲಾಕೃತಿಗಳು ಮತ್ತು ವಿವಿಧ ಪ್ರಭೇದಗಳ ಅಲಂಕಾರಿಕ ಪುಷ್ಪಗಳಿಗೆ ಜನರು ಮಾರು ಹೋದರು.
ಈ ಮೇಳದಲ್ಲಿ ಬೀಜ ಮೇಳ, ಫಲಪುಷ್ಪ ಮೇಳ, ಮತ್ಸ್ಯಮೇಳ, ಜಾನುವಾರು ಮೇಳ, ಕೃಷಿ ತಜ್ಞರೊಂದಿಗೆ ಸಮಾಲೋಚನೆ, ಕೃಷಿಯ ಹೊಸ ಆವಿಷ್ಕಾರಗಳು, ಅಂತರ್ಜಲ ಮರುಪೂರಣ ಸೇರಿದಂತೆ ಹಲವು ಕೃಷಿ ಚಟುವಟಿಕೆಗಳ ಮಾಹಿತಿಯನ್ನು ರೈತರು ಪಡೆದುಕೊಳ್ಳಬಹುದು.
" 150 ಹೈಟೆಕ್ ಮಳಿಗೆ, 214 ಸಾಮಾನ್ಯ ಮಳಿಗೆ, 110 ಯಂತ್ರೋಪಕರಣ ಮಳಿಗೆ, 27 ಟ್ರ್ಯಾಕ್ಟರ್ ಸೇರಿದಂತೆ ಭಾರಿ ಯಂತ್ರೋಪಕರಣಗಳ ಮಳಿಗೆ ಹಾಗೂ 28 ಆಹಾರ ಮಳಿಗೆಗಳು ಕೃಷಿ ವಸ್ತು ಪ್ರದರ್ಶನದಲ್ಲಿ ಬುಕ್ ಆಗಿವೆ" ಎಂದು ಕೃಷಿ ವಿವಿ ಕುಲಪತಿ ತಿಳಿಸಿದ್ದಾರೆ.
Poll (Public Option)

Post a comment
Log in to write reviews