ಟಾಪ್ 10 ನ್ಯೂಸ್
ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಇದಕ್ಕೆ ಅಂಜಲಿ ಕೊಲೆಯೇ ಸಾಕ್ಷಿ: ಪ್ರಲ್ಹಾದ್ ಜೋಶಿ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮತ್ತೊಬ್ಬ ಯುವತಿಯ ಕೊಲೆಯೇ ಸಾಕ್ಷಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೇಲಿಂದ ಮೇಲೆ ಇಂಥ ಘಟನೆಗಳು ನಡೆಯುತ್ತಿರುವುದು ವಿಷಾದಕರ. ಈಗಿನ ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಪರಾಧ ಹಾಗೂ ಕೊಲೆ ಸುಲಿಗೆ ಮಾಡುವ ಪಾತಕಿಗಳಿಗೆ ಕಾನೂನಿನ, ಪೊಲೀಸರ ಭಯವೇ ಇಲ್ಲದಂತಾಗಿದೆ. ಭಂಡ ಧೈರ್ಯದಿಂದ ಈ ತರಹದ ಘಟನೆಗಳು ನಡೆಯುತ್ತಿವೆ ಎಂದು ಕಿಡಿಕಾರಿದ್ದಾರೆ.
Poll (Public Option)

Post a comment
Log in to write reviews