ಟಾಪ್ 10 ನ್ಯೂಸ್
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಇಂದು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ - ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ.
61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಪಟ್ಟಿ ಪ್ರಕಟಿಸಲಾಗಿದೆ. 61 ನಗರ ಸಭೆಗಳಲ್ಲಿನ ಅಧ್ಯಕ್ಷ ಹುದ್ದೆಗಳ ಪೈಕಿ 16ನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ. ಇನ್ನು 15 ಅಧ್ಯಕ್ಷ ಹುದ್ದೆಗಳನ್ನು ಸಾಮಾನ್ಯ ಮಹಿಳೆಯರಿಗೆ ಮೀಸಲು ಮಾಡಲಾಗಿದೆ.
5 ಎಸ್‌ಸಿ ಮೀಸಲಾತಿ ನೀಡಲಾಗಿದ್ದರೆ, 5 ಎಸ್‌ಸಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದೆ. 2 ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ನೀಡಿದ್ದರೆ, 2 ಎಸ್‌ಟಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ.
Poll (Public Option)

Post a comment
Log in to write reviews