
ಬೆಂಗಳೂರು: ಲೈಂಗಿಕ ಹಗರಣದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಆ ಪ್ರಕರಣವನ್ನೂ ಒಳಗೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸಿಐಡಿ ಠಾಣೆಯಲ್ಲಿ ದೂರು ದಾಖಲಾಗಿದೆ ಜತೆಗೆ ಪ್ರಜ್ವಲ್‌ಗೆ ಸಂಬಂಧಿಸಿದ ವಿಡಿಯೋಗಳನ್ನು ಹಂಚಿದ ಆರೋಪದ ಮೇಲೆ ಮಾಜಿ ಶಾಸಕ ಪ್ರೀತಂಗೌಡ ಸೇರಿದಂತೆ ಇಬ್ಬರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಎಸ್‌ಐಟಿ ಕಸ್ಟಡಿಯಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜುಲೈ 8ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಪ್ರಜ್ವಲ್ ಅವರು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.
Poll (Public Option)

Post a comment
Log in to write reviews