
ಬೆಂಗಳೂರು: ಮುಡಾ ಪ್ರಕರಣದ ಬೆನ್ನಲ್ಲೇ ಸಿಎಂ ಗೆ ಸಂಕಷ್ಟ ಎದುರಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಅರ್ಕಾವತಿ ಲೇಔಟ್‌ನಲ್ಲಿ ನಿವೇಶನ ಪಡೆದಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ ರಾಜಶೇಖರ್ ಎಂಬುವರು ಸಿಎಂ ಸಿದ್ದರಾಮಯ್ಯ, ಬಿಡಿಎ ಆಯುಕ್ತ ಹಾಗೂ ಬಿಡಿಎ ಅಧಿಕಾರಿಗಳು “ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಅರ್ಕಾವತಿ ಲೇಔಟ್‌ನಲ್ಲಿ ಹಂಚಿಕೆಯಾಗಿದ್ದ ನಿವೇಶನ ಭೂಗಳ್ಳರ ಪಾಲಾಗುತ್ತಿದೆ. ಅಧಿಕಾರ ದುರ್ಬಳಕೆಯಿಂದ ನಿವೇಶನದಾರರಿಗೆ ತೊಂದರೆಯಾಗುತ್ತಿದೆ” ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
Poll (Public Option)

Post a comment
Log in to write reviews