ಟಾಪ್ 10 ನ್ಯೂಸ್
ಡೆಂಗ್ಯೂಗೆ ಮತ್ತೋರ್ವ ಬಾಲಕಿ ಬಲಿ ! ಹಾಸನದಲ್ಲಿ ಸಾವಿನ ಸಂಖ್ಯೆ 4 ಕ್ಕೆ ಏರಿಕೆ !

ಹಾಸನ: ಶಂಕಿತ ಡೆಂಗ್ಯೂಗೆ ಬಾಲಕಿಯೊಬ್ಬಳು ಸಾವನ್ನಪ್ಪಿರು ಘಟನೆ ಹೊಳೆನರಸೀಪುರ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ನಡೆದದೆ. ಈ ಮೂಲಕ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೂರು ದಿನಗಳ ಹಿಂದೆ ಬಾಲಕಿಯನ್ನು ಹಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೈಸೂರಿನ ಅಪೋಲೊ ಆಸ್ಪತ್ರೆಗೆ ಬಾಲಕಿಯನ್ನು ಸೇರಿಸಲಾಗಿತ್ತು. ಅಲ್ಲಿಯೂ ಬಾಲಕಿಗೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.
ಕಳೆದ ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ನಾಲ್ವರು ಬಾಲಕಿಯರು ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯಲ್ಲಿ ಆತಂಕ ನಿರ್ಮಾಣ ಮಾಡಿದೆ. ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ನಿಗಾ ಇಡಲು ಸೂಚಿಸಲಾಗಿದೆ.
Poll (Public Option)

Post a comment
Log in to write reviews