
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣ ಮಾಸುವ ಮುನ್ನವೇ ದರ್ಶನ್ ಕೇಸ್ ಎಫೆಕ್ಟ್‌ನಿಂದಾಗಿ ಬೆಂಗಳೂರಿನ ಶೆಡ್ ಒಂದರಲ್ಲಿ ಮತ್ತೊಂದು ಮರ್ಡರ್ ನಡೆದಿದೆ. ITC ಉದ್ಯೋಗಿ ಸುಮಾರು 35 ವರ್ಷದ ಅಜಿತ್ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ.
ಮೃತ ಅಜಿತ್‌ನನ್ನು ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡ ಗುಂಟೆಯಲ್ಲಿರುವ ಶೆಡ್‌ಗೆ ಬಾ ಎಂದು ಕಿರಾತಕರು ಕರೆದಿದ್ದರು. ಅಜಿತ್ ಶೆಡ್‌ಗೆ ಬರ್ತಿದ್ದಂತೆ ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅಜಿತ್‌ನನ್ನು ಹಣಕಾಸಿನ ವಿಚಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕಾಕ್ಸ್ ಟೌನ್ ಸಮೀಪದ ಶೆಡ್‌ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾದ ಆರೋಪಿಗಾಗಿ ಪುಲಿಕೇಶಿನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
Poll (Public Option)

Post a comment
Log in to write reviews