ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸಂಕಷ್ಟಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ. ಆರ್ಆರ್ ನಗರ ಕ್ಷೇತ್ರದಲ್ಲಿ 2020 ರಿಂದ 2022ರ ವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಪಾಲಿಕೆ ಆದೇಶ ಹೊರಡಿಸಿದೆ. 2020 ಸೆಪ್ಟೆಂಬರ್ನಿಂದ 2022 ರ ಜುಲೈ 19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ.
ಕಾಮಗಾರಿ ನಡೆಸದೇ ಈ ಅವಧಿಯಲ್ಲಿ ಬಿಲ್ ಮಾಡಿಸಿಕೊಂಡಿರುವ ಮುನಿರತ್ನ ವಿರುದ್ಧ ಆರೋಪ ಕೇಳಿಬಂದಿದೆ. ಇದೀಗ ಬಿಬಿಎಂಪಿ ಕಂದಾಯ ವಿಶೇಷ ಮುನೀಶ್ ಮೌದ್ಗಿಲ್ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೆಪ್ಟೆಂಬರ್ 23 ರಂದೇ ತನಿಖೆಗೆ ಆದೇಶ ಹೊರಡಿಸಿದ್ದರು. ಅದರ ಆಧಾರದಲ್ಲಿ ಸಮಿತಿ ರಚನೆ ಮಾಡಲಾಗಿದೆ.
Post a comment
Log in to write reviews