
ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್‌ನ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದ್ದು, ಎಸ್‌ಐಟಿ ಯಾವಾಗ ತನಿಖೆಗೆ ಕರೆಯುತ್ತೋ ಆಗ ಬಂದು ವಿಚಾರಣೆಗೆ ಹಾಜರಾಜಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.ಅಲ್ಲದೇ ಇಂದು ಮಧ್ಯಾಹ್ನ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ತನಿಖಾಧಿಕಾರಿಗಳು ಭವಾನಿ ರೇವಣ್ಣ ಅವರನ್ನು ಬಂಧಿಸಬಾರದು. ವಿಚಾರಣೆ ನೆಪದಲ್ಲಿ ಸಂಜೆ 5 ಗಂಟೆ ಮೇಲೆ ಇರಿಸಿಕೊಳ್ಳುವಂತಿಲ್ಲ. ಭವಾನಿ ರೇವಣ್ಣ ಕೆ.ಆರ್.ನಗರ ಹಾಗೂ ಹಾಸನ ಜಿಲ್ಲೆಗೆ ಹೋಗುವಂತಿಲ್ಲ ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಆದೇಶಿಸಿದ್ದಾರೆ.
Poll (Public Option)

Post a comment
Log in to write reviews