2024-09-19 04:39:38

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಪೆಕ್ಸ್‌ ಬ್ಯಾಂಕ್‌‌ನಲ್ಲಿ ಸಾವಿರಾರು ಕೋಟಿ ಹಗರಣ: ಬಿಜೆಪಿ

ಬೆಂಗಳೂರು: ಅಪೆಕ್ಸ್‌ ಬ್ಯಾಂಕ್‌‌ನಲ್ಲಿ ಸಾವಿರಾರು ಕೋಟಿ ರೂ.ಹಗರಣ ನಡೆದಿದೆ ಎಂದು ರಾಜ್ಯ ಬಿಜೆಪಿ ಮತ್ತೊಂದು ಗಂಭೀರ ಆರೋಪ ಮಾಡಿದೆ. 

ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ವಾಲ್ಮೀಕಿ ನಿಗಮದಲ್ಲಿ ಹಗರಣವಾಯ್ತು, ಮುಡಾದಲ್ಲಿ ಹಗರಣವಾಯ್ತು, ಈಗ ಅಪೆಕ್ಸ್‌ ಬ್ಯಾಂಕ್ನ ಸರದಿ. ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರು ಅಪೆಕ್ಸ್‌ ಬ್ಯಾಂಕ್‌ ನಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆಸಿದ್ದು, ಹೈಕೋರ್ಟ್‌ ಈ ಸಂಬಂಧ ತನಿಖೆಗೆ ಆದೇಶಿಸಿದೆ ಎಂದು ತಿಳಿಸಿದೆ.
ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಬಹುಪಾಲು ಸಚಿವರು ಹಾಗೂ ಶಾಸಕರು ಪರಪ್ಪನ ಅಗ್ರಹಾರಕ್ಕೆ ತಾ ಮುಂದು ನಾ ಮುಂದು ಎಂಬ ರೇಸ್‌ ನಲ್ಲಿರುವುದು ಕರ್ನಾಟಕದ ದುರಂತ ಎಂದು ಹೇಳಿದೆ.
 

Post a comment

No Reviews